ಹೆತ್ತ ತಾಯಿಗಿಂತ ಅತ್ಯಧಿಕ ಮಾಯವುಂಟೆ

ರಾಗ — ಮೋಹನ
ತಾಳ — ಅಟ್ಟ

ಹೆತ್ತ ತಾಯಿಗಿಂತ ಅತ್ಯಧಿಕ ಮಾಯವುಂಟೆ |
ಉತ್ತಮ ಅಶ್ವವ ಕತ್ತೆ ಹೋಲುವುದುಂಟೆ? ||ಪ||

ವಿತ್ತವುಳ್ಲವನ ಕುಲ ಎಣಿಸುವುದುಂಟೆ |
ಸ್ವಾರ್ಥಕೆ ನ್ಯಾಯವೆಂದಾದರೂ ಉಂಟೆ? ||೧||

ಅತ್ತೆಮನೆ ಸೇರುವಗೆ ಅಭಿಮಾನವುಂಟೆ |
ಬತ್ತಲೆ ತಿರುಗುವಗೆ ಭಯವು ಇನ್ನುಂಟೆ? ||೨||

ಪೃಥ್ವಿಯೊಳಗೆ ಕಾಗಿನೆಲೆಯಾದಿಕೇಶವಗೆ |
ಮರ್ತ್ಯದೊಳನ್ಯ ದೇವರು ಸರಿಯುಂಟೆ? ||೩||


ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

This site uses Akismet to reduce spam. Learn how your comment data is processed.