ಕುಲದ ನೆಲೆಯನೇನಾದರೂ ಬಲ್ಲಿರಾ?

ರಾಗ — ಪಂತುವರಾಳಿ ತಾಳ — ಅಟ್ಟ

ಕುಲ ಕುಲ ಕುಲವೆಂದು ಹೋರಾಡದಿರಿ ನಿಮ್ಮ |
ಕುಲದ ನೆಲೆಯನೇನಾದರೂ ಬಲ್ಲಿರಾ? ||ಪ||

ಹುಟ್ಟದಾ ಯೋನಿಗಳಿಲ್ಲ ಮೆಟ್ಟದಾ ಭೂಮಿಗಳಿಲ್ಲ |
ಅಟ್ಟು ಉಣ್ಣದ ವಸ್ತುಗಳಿಲ್ಲವೊ ||
ಗುಟ್ಟು ಕಾಣಿಸಿಬಂತು ಹಿರಿದೇನು ಕಿರಿದೇನು |
ನೆಟ್ಟನೆ ಸರ್ವಜ್ಞನ ನೆನೆಕಾಣೊ ಮನುಜ ||೧||

ಜಲವೆ ಸಕಲ ಕುಲಕೆ ತಾಯಿಯಲ್ಲವೆ ಆ |
ಜಲದ ಕುಲವನೇನಾದರೂ ಬಲ್ಲಿರಾ? ||
ಜಲದ ಬೊಬ್ಬುಳಿಯಂತೆ ಸ್ಥಿರವಲ್ಲ ಈ ದೇಹ |
ನೆಲೆಯನರಿತು ನೀ ಹರಿಯನು ನೆನೆ ಮನುಜ ||೨||

ಹರಿಯೇ ಸರ್ವೋತ್ತಮ ಹರಿಯೇ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು ||
ಸಿರಿಕಾಗಿನೆಲೆಯಾದಿಕೇಶವರಾಯನ |
ಚರಣಕಮಲವನು ಕೀರ್ತಿಸುವನೆ ಕುಲಜ ||೩||


ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

This site uses Akismet to reduce spam. Learn how your comment data is processed.