ಕೇಳನೋ ಹರಿ ತಾಳನೊ

ಕೇಳನೋ ಹರಿ ತಾಳನೊ ಪ
ತಾಳ ಮೇಳಗಳಿದ್ದು ಪ್ರೇಮವಿಲ್ಲದ ಗಾನ ||ಅ||

ತಂಬೂರಿ ಮೊದಲಾದ ಅಖಿಳ ವಾದ್ಯಗಳಿದ್ದು
ಕೊಂಬು ಕೊಳಲು ಧ್ವನಿ ಸ್ವರಗಳಿದ್ದು
ತುಂಬುರು ನಾರದರ ಗಾನ ಕೇಳುವ ಹರಿ
ನಂಬಲಾರ ಈ ಡಂಭಕದ ಕೂಗಾಟ ||೧||

ನಾನಾ ಬಗೆಯ ರಾಗ ಭಾವ ತಿಳಿದು ಸ್ವರ
ಜ್ಞಾನ ಮನೋಧರ್ಮ ಜಾತಿಯಿದ್ದು
ದಾನವಾರಿಯ ದಿವ್ಯ ನಾಮರಹಿತವಾದ
ಹೀನ ಸಂಗೀತ ಸಾಹಿತ್ಯಕ್ಕೆ ಮನವಿತ್ತು ||೨||

ಅಡಿಗಡಿಗಾನಂದ ಬಾಷ್ಪಪುಳಕದಿಂದ
ನಡೆನುಡಿಗೆ ಶ್ರೀ ಹರಿಯೆನ್ನುತ
ದೃಢ ಭಕ್ತರನು ಕೂಡಿ ಹರಿ ಕೀರ್ತನೆ ಪಾಡಿ
ಕಡೆಗೆ ಪುರಂದರವಿಠಲನೆಂದರೆ ಕೇಳ್ವ ||೩||
*****

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

This site uses Akismet to reduce spam. Learn how your comment data is processed.