ಅಮ್ಮಿ: ಮೊಲೆ ಹಾಲು
ಠಾವಿಲಿ- ಸ್ಥಳದಲ್ಲಿ, ಜಾಗದಲ್ಲಿ
ಧರ್ಮವೇ ಜಯವೆಂಬ ದಿವ್ಯ ಮಂತ್ರ
ಧರ್ಮವೇ ಜಯವೆಂಬ ದಿವ್ಯ ಮಂತ್ರ ಪ
ಮರ್ಮವನರಿತು ಮಾಡಲಿಕೆ ಬೇಕು ತಂತ್ರ ಅ
ವಿಷವಿಕ್ಕಿದವಗೆ ಷಡ್ರಸವನುಣಿಸಲು ಬೇಕು
ದ್ವೇಷ ಮಾಡಿದವನ ಪೋಷಿಸಲಿಬೇಕು
ಪುಸಿ ಮಾಡಿ ಕೆಡಿಸುವನ ಹಾಡಿ ಹರಸಲಿ ಬೇಕು ೧
ಹಿಂದೆ ನಿಂದಿಪರನು ವಂದಿಸುತಲಿರಬೇಕು
ಬಂಧನದೊಳಿಟ್ಟವರ ಬೆರೆಯಬೇಕು
ಕೊಂದ ವೈರಿಯ ಮನೆಗೆ ನಡೆದು ಹೊಗಲಿಬೇಕು
ಕುಂದೆಣಿಸುವವರ ಗೆಳೆತನ ಮಾಡಬೇಕು ೨
ಕೊಂಡೊಯ್ದು ಬಡಿಯುವವರ ಕೊಂಡಾಡುತಿರಬೇಕು
ಕಂಡು ಸಹಿಸದವರ ಕರೆಯಬೇಕು
ಪುಂಡರೀಕಾಕ್ಷ ಶ್ರೀಪುರಂದರವಿಠ್ಠಲನ
ಕೊಂಡಾಡಿ ತಾ ಧನ್ಯನಾಗಬೇಕು ೩
