ಯಾರಿಗೆ ಬಂತು ಎಲ್ಲಿಗೆ ಬಂತು
ನಲವತ್ತೇಳರ ಸ್ವಾತಂತ್ರ್ಯ
ಟಾಟಾ ಬಿರ್ಲಾ ಜೋಬಿಗೆ ಬಂತು
ಜನಗಳ ತಿನ್ನುವ ಬಾಯಿಗೆ ಬಂತು
ಕೋಟ್ಯಾಧೀಶನ ಕೋಣೆಗೆ ಬಂತು
ನಲವತ್ತೇಳರ ಸ್ವಾತಂತ್ರ್ಯ
ಬಡವ ಮನೆಗೆ ಬರಲಿಲ್ಲ
ಬೆಳಕಿನ ಕಿರಣ ತರಲಿಲ್ಲ
ಗೋಳಿನಕ ಡಲನು ಬತ್ತಿಸಲಿಲ್ಲ
ಸಮತೆಯ ಹೂವನು ಅರಳಿಸಲಿಲ್ಲ
ಹಣವಂತರು ಕೈಸನ್ನೆ ಮಾಡಿದರೆ
ಕತ್ತಲೆಯಲ್ಲಿ ಬೆತ್ತಲೆಯಾಯಿತು
ಯಾರೂಕಾಣದ ಸ್ವಾತಂತ್ರ್ಯ
ನಲವತ್ತೇಳರ ಸ್ವಾತಂತ್ರ್ಯ
ಸಾವಿರಾರುಜನ ಗೋರಿಯಾದರು
ಲಕ್ಷಲಕ್ಷ ಜನಗಲ್ಲಿಗೇರಿದರು
ರೈತ ಕಾರ್ಮಿಕರು ರಕ್ತವ ಕೊಟ್ಟರು
ಯಾರಿಗೆ ಬಂತು ಸ್ವಾತಂತ್ರ್ಯ
ನಲವತ್ತೇಳರ ಸ್ವಾತಂತ್ರ್ಯ
ಪೋಲೀಸರ ಬೂಟಿಗೆ ಬಂತು
ಮಾಲೀಕರ ಚಾಟಿಗೆ ಬಂತು
ಬಂದೂಕದ ಗುಂಡಿಗೆ ಬಂತು
ನಲವತ್ತೇಳರ ಸ್ವಾತಂತ್ರ್ಯ
ಪಾರ್ಲಿಮೆಂಟಿನ ಕುರ್ಚಿಯ ಮೇಲೆ
ವರ್ಷಗಟ್ಟಳೆ ಚರ್ಚೆಗೆ ಕೂತು
ಬಡವರ ಬೆವರು ರಕ್ತವ ಕುಡಿದು
ಏಳಲೆ ಇಲ್ಲಸ್ವಾತಂತ್ರ್ಯ
ನಲವತ್ತೇಳರ ಸ್ವಾತಂತ್ರ್ಯ
ಯಾರಿಗೆ ಬಂತು ಎಲ್ಲಿಗೆ ಬಂತು
ನಲವತ್ತೇಳರ ಸ್ವಾತಂತ್ರ್ಯ
*****