ಭೂತ

-೧-

ಕಾಡುತ್ತಿವೆ ಭೂತಕಾಲದ ಭ್ರೂಣಗೂಢಗಳು:ಹುಗಿದ ಹಳಬಾವಿಯೊಳ ಕತ್ತಲ ಹಳಸು ಗಾಳಿ
ಅಂಬೆಗಾಲಿಟ್ಟು ತಲೆಕೆಳಗು ತೆವಳುತ್ತೇರಿ‌ಆಳ್ಳಳ್ಳಾಯಿ ಜಪಿಸುವ ಬಿಸಿಲಕೋಲಿಗೆರಗಿ ತೆಕ್ಕಾಮುಕ್ಕಿ
ಹಾಯುತ್ತಿದೆ ತುಳಸಿವೃಂದಾವನದ ಹೊದರಿಗೂ.
ತೊಟ್ಟು ಕಳಚಿದ ಹೊಕ್ಕುಳಿನ ಬಳ್ಳಿ ದಡದಲ್ಲಿಕತ್ತರಿಸಿದಿಲಿಬಾಲ ಮಿಡುಕುತ್ತದೆ.
ಕತ್ತಲಲ್ಲೇ ಕಣ್ಣು ನೆಟ್ಟು ತಡಕುವ ನನಗೆ ಹೊಳೆವುದು ಹಠಾತ್ತನೊಂದೊಂದು ಚಿನ್ನದ ಗೆರೆ;
ಅಮಾವಾಸ್ಯೆ ಕಂದಕಗಳಲ್ಲಿ ಹೇಗೋ ಬಿದ್ದು ಒದ್ದಾಡುತ್ತಿರುವ ಗರಿಸುಟ್ಟ ತಾರೆ. || ೧೦||

-೨-

ವರ್ತಮಾನದ ಪತ್ರಿಕೆಯ ತುಂಬ ಭೂತದ ಸುದ್ದಿ.
ಈರ ಮೇಲಕ್ಕೊಂದು ಮಡಿ, ಕೆಳಕ್ಕೇಳು ಮಂಜಿನ ಶಿಖರಿ;
ದ್ದಕ್ಕಿದ್ದಂತಕಸ್ಮಾತ್ತಗ್ನಿನುಡಿಯುವ
ಅಂಜು ಮುಸುಕಿದ ಮುಗ್ಧ ಜ್ವಾಲಾಮುಖಿ.
ಅತ್ರಿಕೆಯ ಮುಚ್ಚಿದರು –
ಅದ್ದಿರದ ಖಾಲಿ ಕಂಕಾಲಕೋಣೆಗಳಲ್ಲಿ
ಆಳವಿಲ್ಲದೆ ಮೂಕಸನ್ನೆ ಮುಲುಕುವ ತಿರುಗುಮುರುಗು ಪಾದದ ಪರಿಷೆ.
ಂತರಾಳಗಳಲ್ಲಿ ನಿಂತ ನೀರುಗಳಲ್ಲಿ
ಅಂತಿ ಕೈ ಬಡಿವ ಬೀಜಾಣುಜಾಲ;
ಆಳರಂಗಸ್ಥಳದ ಪರದೆಮುರಿಮರೆಯಲ್ಲಿ ||೨೦||
ಆತು ಹೆಕ್ಕುವ ಮಿಣುಕುಮೊನೆಯ ಬಾಲ, – ಇವು
ಅಯಸವೆ ಹೊರಂಗಳದ ರಂಗುರಂಗಿನ ಬಳ್ಳಿಹೂವು ಹೊದರ?

-೩-
ನೀರುನೆಲೆಯಿಲ್ಲದಲೆವರು ಪಿತೃಪಿತಾಮಹರು,
ಆಳಿ ಹೆದ್ಹ್ಡೆರೆಲಾಳಿಗಂಟಿ ನೆಲ ಸಿಕ್ಕಿಯೂ ದಕ್ಕದವರು.
ಚ್ಚಾಟನೆಯ, ತರ್ಪಣದ ತಂತ್ರ ಬಲ್ಲೆ, ಆದರು ಮಂತ್ರ ಮರೆತೆ;
ಅರಿದೇ ಹೀಗೆ ಆಡಿಸುತ್ತಿದ್ದೇನೆ ಮಂತ್ರದಡ.
ಉರೋಹಿತರ ನೆಚ್ಚಿ ಪಶ್ಚಿಮಬುದ್ಧಿಯಾದೆವೋ;
ನ್ನಾದರೂ ಪೂರ್ವಮೀಮಾಂಸೆ ಕರ್ಮಕಾಂಡಗಳನ್ನು ಬಗೆಯಬೇಕು.
ಗೆವಾಗ್ಗೆ ಮೊದಲು ಕೋಶಾವಸ್ಥೆ ಮಣ್ಣು;
ಎಳಕ್ಕೆ, ತಳಕ್ಕೆ ಗುದ್ದಲಿಯೊತ್ತಿ ಕುಕ್ಕಿದರೆ
ಅಂಡೀತು ಗೆರೆಮಿರಿವ ಚಿನ್ನದದಿರು. ||೩೦||
ಒರತೆಗೆದು ಸುಟ್ಟು ಸೋಸುವಪರಂಜಿ ವಿದ್ಯೆಗಳ
ನ್ನಾದರೂ ಕೊಂಚ ಕಲಿಯಬೇಕು;
ಒನ್ನ ಕಾಯಿಸಿ ಹಿಡಿದು ಬಡಿದಿಷ್ಟದೇವತಾ
ಇಗ್ರಹಕ್ಕೊಗ್ಗಿಸುವ ಅಸಲು ಕಸಬು.

-೪-
ಬಾವಿಯೊಳಗಡೆ ಕೊಳೆವ ನೀರು; ಮೇಲಕ್ಯಾವಿ;
ಕಾಶದುದ್ದಕೂ ಅದರ ಕಾರಣ ಬೀದಿ;
ಆರ್ಮುಗಿಲ ಖಾಲಿಕೋಣೆಯ ಅಗೋಚರ ಬಿಂದು
ಅವಮಾಸವೂ ಕಾವ ಭ್ರೂಣರೂಪಿ –
ಂತರಪಿಶಾಚಿ ಗುಡುಗಾಟ, ಸಿಡಿಲಿನ ಕಾಟ – ||೪೦||
ಊತರೂಪಕ್ಕೆ ಮಳೆ ವರ್ತಮಾನ.
ಗೆದುತ್ತ ಗದ್ದೆಗಳ ಕರ್ಮಭೂಮಿಯ ಮರಣ;
ಅತ್ತಗೋದುವೆ ಹಣ್ಣು ಬಿಟ್ಟ ವೃಂದಾವನ,
ಉಡಿಗೋಪುರಗಳ ಬಂಗಾರ ಶಿಖರ.
*****

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ