ನೀಲಾಂಬಿಕೆ

೧ ಸದುವಿನಯದ ತುಂಬಿದ ಕೊಡ ತಂದಳು ನೀಲಾಂಬಿಕೆ, ಕಲ್ಯಾಣದ ಅಂಗಳದಲಿ ತಳಿ ಹೊಡೆದಳು ಛಂದಕೆ. ಸಮಚಿತ್ತದ ರಂಗೋಲಿಯು ಒಳಹೊರಗೂ ಧೂಪವು, ಹಾರಾಡುವ ಹೊಸತಿಲಲ್ಲಿ ಹೊಯ್ದಾಡದ ದೀಪವು. ೨ ಮಹಾಮನೆಯ ಮಹಾತಾಯಿ ಮಾಸದ ಮಡಿ ಹಾಸಲು, […]

ನಂಬಿಕೆ

ಅನಂತವೆಂದರೂ ಆಕಾಶಕೊಂದು ಆಕೃತಿಯುಂಟು, ನೀಲವೆಂದರೂ ನೂರು ಬಣ್ಣದ ಲೀಲಗವಕಾಶವುಂಟು. ಭೂಮಿಯ ಮೇಲೆ ಕಾಲೂರಿ ನಡೆದಿದ್ದರೂ ಇದರ ಸ್ತರಗಳ ನಡುವೆ ಸ್ಥಿರಗೊಂಡ ಒಡನಾಟ, ನಿರಂತರ ನಂಟು. ಹಗಲೆಲ್ಲ ಹಸುರಾಗಿ, ತುಂಬು ಕೆಂಪಾಗಿ, ರೆಂಬೆ – ಕೊಂಬೆಗಳೆಲ್ಲ […]

ಲಾಲ ಬಹಾದ್ದೂರ ಶಾಸ್ತ್ರಿ

ನಮ್ಮ ಮಧ್ಯೆ ಇವನಿದ್ದನೆಂದರೆ ನಂಬುವೆಯ ಇಷ್ಟು ಸಾದಾ ಸೀದಾ ಮನುಷ್ಯ? ಬಡತನದ ಪಲ್ಲಕ್ಕಿ ಹೊತ್ತು ಮೆರೆಸಿದ ಪ್ರಾಮಾಣಿಕತೆಯ. ಹೆಂಡತಿ ಮಕ್ಕಳಿಗೆ ಆಸ್ತಿ ಸಂಪಾದಿಸಿದ ಮನೆಯಿರದ ಪ್ರಧಾನಿ: ಇವನೆಂಥ ಭಾರತೀಯ?! ಬಂದದ್ದು ಹಂಜಿಯ ಮಾಡಿ ರಾಟ […]